ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ದವಾಖಾನೆ ಲೋಕಾರ್ಪಣೆ….

ಮಂಗಳೂರು: ಮಂಗಳೂರು ಹಳೆ ಸೆಷನ್ಸ್ ನ್ಯಾಯಾಲಯ ಕಟ್ಟಡದಲ್ಲಿ ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಡ್ಲೂರು ಸತ್ಯ ನಾರಾಯಣ ಆಚಾರ್ಯರವರು ದವಾಖಾನೆಯನ್ನು ಲೋಕಾರ್ಪಣೆ ಮಾಡಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವಕೀಲ ಸಂಘದ ಅಧ್ಯಕ್ಷರಾದ ನರಸಿಂಹ ಹೆಗ್ಡೆ ಮತ್ತು ಇತರ ಪದಾಧಿಕಾರಿಗಳು, ನ್ಯಾಯಾಂಗ ಇಲಾಖೆ ಅಧಿಕಾರಿಗಳು, ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಪ್ರತಿ ನ್ಯಾಯಾಲಯದಲ್ಲಿ ಡಿಸ್ಪೆನ್ಸರಿ ಇರಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಈ ದವಾಖಾನೆ ಆರಂಭಿಸಲಾಗಿದೆ.