ರಾಜ್ಯದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು..

ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕು ದೃಢಪಟ್ಟವರ ಸಂಖ್ಯೆ 15ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ತಮ್ಮ ಟ್ವೀಟರ್​ನಲ್ಲಿ ದೃಢಪಡಿಸಿದ್ದಾರೆ.

ಇಂದು ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಸೋಂಕು ಪತ್ತೆಯಾದ ವ್ಯಕ್ತಿಯನ್ನ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗುವುದು ಎಂದೂ ಅವರು ಹೇಳಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button