ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಸಾಹಿತ್ಯ ಅಗತ್ಯ- ಹರಿಕೃಷ್ಣ ಪುನರೂರು…
ಬಂಟ್ವಾಳ:ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಸಾಹಿತ್ಯ ಅಗತ್ಯವಾಗಿದೆ. ಸರಕಾರಕ್ಕೆ ಕನ್ನಡದ ಬಗ್ಗೆ ಕಾಳಜಿ ಇಲ್ಲ. ಕನ್ನಡ ಶಾಲೆಗಳು ಮುಚ್ಚುತ್ತಿವೆ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಇಂಗ್ಲೀಷ್ ಮಾಧ್ಯಮ ಶಾಲೆಗಳು ಹೆಚ್ಚಾಗುತ್ತಿವೆ. ಕನ್ನಡಮ್ಮನ ಮಕ್ಕಳಿಗೆ ಕನ್ನಡ ಕಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಅವರು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಏರ್ಪಡಿಸಲಾದ ಜಾತ್ರೋತ್ಸವ, ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಯೋಧ ತಾರನಾಥ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಇರಾ ನೇಮು ಪೂಜಾರಿ , ಗ್ರಾ.ಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ , ರಾಜಾರಾಮ ವರ್ಮ ವಿಟ್ಲ ,ಇರಾ ಯುವಕ ಮಂಡಲ ಅಧ್ಯಕ್ಷ ಚರಣ್ ಟಿ.ಪಕ್ಕಳ, ಜಗದೀಶ ಶೆಟ್ಟಿ ಇರಾ, ಜಯರಾಮ ರಾವ್, ಡಾ.ವಿಜಯಲಕ್ಷ್ಮೀ ಉಪಸ್ಥಿತರಿದ್ದರು.
ಚು.ಸಾಪ. ಕಾರ್ಯದರ್ಶಿ ಹರೀಶ ಸುಲಾಯ ಒಡ್ಡಂಬೆಟ್ಟು ಸ್ವಾಗತಿಸಿದರು, ಎಮ್. ಸುಬ್ರಾಯ ಭಟ್, ಸುರೇಖ ಎಳವಾರ ನಿರೂಪಿಸಿದರು. ಸುಧಾ ನಾಗೇಶ್ ವಂದಿಸಿದರು.