ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಸೋಂಕು ದೃಢ….

ಬೆಂಗಳೂರು:ರಾಜ್ಯದಲ್ಲಿ ಮತ್ತೊಂದು ಕೊರೋನಾ ಪ್ರಕರಣ ಪತ್ತೆಯಾಗಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಬಿದನೂರು ನಿವಾಸಿಗೆ ಸೋಂಕು ಪತ್ತೆಯಾಗಿದೆ.
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಅಂತ ಆರೋಗ್ಯ ಸಚಿವ ಶ್ರೀರಾಮಲು ಟ್ವಿಟ್ ಮಾಡಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿದೆ.