ಮಂಗಳೂರು ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳು ಲಾಕ್ ಡೌನ್….

ನವದೆಹಲಿ : ಕೊರೊನಾ ವೈರಸ್ ದೇಶದ ವಿವಿಧ ಭಾಗಗಳಲ್ಲಿ ವೇಗವಾಗಿ ಹಬ್ಬುತ್ತಿರುವುದರಿಂದ ಮಂಗಳೂರು ಸೇರಿದಂತೆ ದೇಶದ ಒಟ್ಟು 75 ಜಿಲ್ಲೆಗಳನ್ನು ಲಾಕ್ ಡೌನ್ ಸ್ಥಿತಿಯಲ್ಲಿರಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಒಂಭತ್ತು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಮುಚ್ಚಿ ಇಂದು ಆದೇಶ ಹೊರಡಿಸಲಾಗಿದೆ.



