ಕೊರೊನಾ ಮಂಗಳೂರಿನಲ್ಲಿ ಮೊದಲ ಪ್ರಕರಣ ಪತ್ತೆ….
ಮಂಗಳೂರು : ಇತ್ತೀಚೇಗೆ ದುಬೈ ನಿಂದ ಮಂಗಳೂರಿಗೆ ಆಗಮಿಸಿದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ತಿಳಿಸಿದ್ದಾರೆ.
ಕೊರೊನಾ ಸೋಂಕಿತ ವ್ಯಕ್ತಿ ಭಟ್ಕಳ ಮೂಲದವರಾಗಿದ್ದು, ಮಾ.19ರಂದು ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಆಗಮಿಸಿದ್ದರು. ಅವರನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿದ್ದು, ಅವರನ್ನು ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಂದು ಪಾಸಿಟಿವ್ ರಿಪೋರ್ಟ್ ದೊರೆತಿದ್ದು ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುವುದು ಎಂದು ಅವರು ತಿಳಿಸಿದರು.