ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ತುರ್ತಾಗಿ ವೆನ್‌ಲಾಕ್‌ ಆಸ್ಪತ್ರೆಗೆ ಭೇಟಿ…

ಮಂಗಳೂರು : ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಸೋಮವಾರ ನಡೆದಿದ್ದು ಮಂಗಳವಾರ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವೆನ್‌ಲಾಕ್‌ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ವೆನಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ ಎನ್ನುವ ಊಹಾಪೋಹದ ಬಗ್ಗೆ ಗೊಂದಲ ಪಡುತ್ತಿರುವುದನ್ನು ಅರಿತುಕೊಂಡ ಸಂಸದರು ದೆಹಲಿಯಿಂದ ಬೆಂಗಳೂರಿಗೆ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ಮಂಗಳೂರಿಗೆ ಆಗಮಿಸಿದರು. ಮಂಗಳೂರಿಗೆ ತಲುಪಿದ ಕೂಡಲೇ ನೇರವಾಗಿ ವೆನ್‌ಲಾಕ್ ಆಸ್ಪತ್ರೆಗೆ ತೆರಳಿದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.

ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು.

ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

ಜನರು ಊಹಾಪೋಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿ ಬದ್ಧವಾಗಿದೆ ಎಂದು ನಳಿನ್ ಕುಮಾರ್ ಜನರಿಗೆ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button