ನಾಳೆಯಿಂದ ದ.ಕ.ಜಿಲ್ಲೆ ಸಂಪೂರ್ಣ ಬಂದ್ – ಸಂಸದ ನಳಿನ್ ಕುಮಾರ್…
ಮಂಗಳೂರು:ದಕ್ಷಿಣಕನ್ನಡ ಜಿಲ್ಲೆ ನಾಳೆಯಿಂದ ಸಂಪೂರ್ಣ ಬಂದ್ ಆಗಲಿದ್ದು, ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತವೇ ಮನೆಗೆ ತಲುಪಿಸಲಿದೆ ಎಂದು ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.
ಇವತ್ತು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶವನ್ನು ನೀಡಲಾಗಿದೆ. ಆದರೆ ನಾಳೆಯಿಂದ ಈ ವ್ಯವಸ್ಥೆ ಜಾರಿಯಲ್ಲಿ ಇರುವುದಿಲ್ಲ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಅಗತ್ಯ ವಸ್ತುಗಳನ್ನು ಅವಶ್ಯಕತೆಯಿರುವವರ ಮನೆ ಬಾಗಿಲಿಗೇ ತಲುಪಿಸಲಾಗುವುದು.
ಸರಕಾರದ ಕಡೆಯಿಂದ ಈ ವ್ಯವಸ್ಥೆಯನ್ನು ಯಾವ ರೀತಿಯಲ್ಲಿ ಮಾಡಬಹುದು ಎನ್ನುವ ಕುರಿತು ಅಧಿಕಾರಿಗಳ ಜೊತೆಗೆ ಚರ್ಚೆಯನ್ನೂ ನಡೆಸಲಾಗುತ್ತಿದೆ. ಅಲ್ಲದೆ ಕೇರಳ ಭಾಗದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿಗೆ ರೋಗಿಗಳು ಬರುತ್ತಿರುವುದು ಗಮನಕ್ಕೆ ಬಂದಿದೆ.
ಸದ್ಯದ ಸ್ಥಿತಿಯಲ್ಲಿ ಮಂಗಳೂರಿನಲ್ಲಿರುವ ಆಸ್ಪತ್ರೆ ಜಿಲ್ಲೆಯ ಜನರಿಗೇ ಸಾಕಾಗುವುದಿಲ್ಲ. ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಗಳನ್ನು ಜಿಲ್ಲೆಯ ಒಳಗೆ ಬಿಡಬಾರದು ಎಂದು ನಿರ್ಧರಿಸಲಾಗಿದೆ. ಎಲ್ಲಾ ಅಂಬ್ಯುಲೆನ್ಸ್ ಗಳನ್ನು ತಲಪಾಡಿ ಗಡಿಯಲ್ಲೇ ನಿರ್ಬಂಧಿಸಲಾಗುತ್ತಿದೆ ಎಂದಿದ್ದಾರೆ.