ದ.ಕ. ಜಿಲ್ಲೆ ಭಾನುವಾರವೂ ಸಂಪೂರ್ಣ ಬಂದ್‌…

ಮಂಗಳೂರು : ಕೊರೋನ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ರವಿವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗೆಯೇ ತುರ್ತು ಸೇವೆಗಳಾದ ಹಾಲು ವಿತರಣೆ, ಮೆಡಿಕಲ್, ಪತ್ರಿಕೆ, ಪೆಟ್ರೋಲ್ ಬಂಕ್‌, ಅಡುಗೆ ಅನಿಲ ವಿತರಣೆಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಸುಮಾರು 400 ವರ್ತಕರ ಸಭೆ ಮಾಡಿ ಮನೆ ಮನೆಗೆ ಆಹಾರ ಸಾಮಾಗ್ರಿ ಪೂರೈಕೆ ಮಾಡುವ ಕುರಿತಾಗಿ ಚರ್ಚೆ ನಡೆಸಲಾಗುವುದು. ಹಾಗೆಯೇ ಆನ್‌ಲೈನ್‌ ಮೂಲಕವೂ ಆರ್ಡರ್‌ ಮಾಡಲಾಗುತ್ತದೆ. ಆನ್‌ಲೈನ್‌ ಮೂಲಕ ಸಂಪರ್ಕ ಮಾಡಲು ಸಾಧ್ಯವಾಗದವರು 1077 ಸಂಖ್ಯೆಗೆ ಕರೆ ಮಾಡಬಹುದು ಎಂದು ಹೇಳಿದ್ದಾರೆ.

Kota 300x178

Related Articles

Leave a Reply

Your email address will not be published. Required fields are marked *