ದ.ಕ – ಸುಳ್ಯ ದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ….
ಸುಳ್ಯ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ವರದಿಯಾಗಿದೆ. ಸುಳ್ಯ ನಿವಾಸಿಯಾಗಿರುವ 32 ವರ್ಷದ ಯುವಕನಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ.
ದುಬೈನಿಂದ ಮಾ.18 ರಂದು ಭಾರತಕ್ಕೆ ಹಿಂತಿರುಗಿದ್ದ ಸುಳ್ಯ ಮೂಲದ 34 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಐಸೊಲೇಶನ್ ವಾರ್ಡ್ ನಲ್ಲಿ ಇರಿಸಲಾಗಿತ್ತು. ಈತನ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು ಇಂದು ಬೆಳಗ್ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಈ ಹಿನ್ನಲೆಯಲ್ಲಿ ಆತನನ್ನು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಮನೆಯವರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.