ದ.ಕ – ಬುಧವಾರದಿಂದ 7ರಿಂದ 12ರ ತನಕ ಅಗತ್ಯ ವಸ್ತುಗಳು ಲಭ್ಯ….
ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಪ್ರತಿನಿತ್ಯ ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆಯ ತನಕ ಅಗತ್ಯ ಸಾಮಾಗ್ರಿಗಳು ಜನಸಾಮಾನ್ಯರಿಗೆ ಲಭ್ಯವಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮೂರು ದಿನಗಳ ಸಂಪೂರ್ಣ ಬಂದ್ ಬಳಿಕ ಇಂದು ದ.ಕ. ಜಿಲ್ಲೆಯಲ್ಲಿ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಇನ್ನು ನಾಳೆಯಿಂದ ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂಬುವುದಾಗಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.