ದೆಹಲಿ ಮಸೀದಿಯ ಕಾರ್ಯಕ್ರಮದಲ್ಲಿ ಮಂಗಳೂರಿನ ವ್ಯಕ್ತಿ ಭಾಗಿ….

ಮಂಗಳೂರು: ದೆಹಲಿಯ ಮರ್ಕಝ್ ನಿಜಾಮುದ್ದೀನ್’ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಭಾಗಿಯಾಗಿರುವ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ 19 ಸೋಂಕು ಈಗಾಗಲೇ ದೃಢಪಟ್ಟಿದೆ.
ತೊಕ್ಕೊಟ್ಟು ಸಮೀಪದ ವ್ಯಕ್ತಿಯೊಬ್ಬರು ದೆಹಲಿಯಲ್ಲಿ ನಡೆದೆ ಮರ್ಕಝ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಆ ವ್ಯಕ್ತಿ ಮಂಗಳೂರಿಗೆ ಮರಳಿದ್ದು, ಮಂಗಳೂರು ಹಾಗೂ ನಗರದ ಅಸುಪಾಸಿನಲ್ಲಿ ತಿರುಗಾಟವನ್ನೂ ನಡೆಸಿದ್ದು, ಮನೆ ಮನೆಗೆ ದಿನಸಿ ಸಾಮಾಗ್ರಿಗಳನ್ನೂ ಪೂರೈಸುವ ಕಾರ್ಯದಲ್ಲಿ ನಿರತನಾಗಿದ್ದ ಎಂದು ತಿಳಿದುಬಂದಿದೆ.
ಸದ್ಯ ದೆಹಲಿಯಿಂದ ಬಂದ ತೊಕ್ಕೊಟ್ಟಿನ ವ್ಯಕ್ತಿ ಮನೆಯಲ್ಲೇ ಇರುವುದನ್ನು ಪತ್ತೆ ಹಚ್ಚಿರುವ ಪೋಲೀಸರು ಹಾಗೂ ಆರೋಗ್ಯಾಧಿಕಾರಿಗಳು ವ್ಯಕ್ತಿಯನ್ನು ಮನೆಯಿಂದ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.