ಕಾಸರಗೋಡು ಗಡಿ ಹೆದ್ದಾರಿ ದಿಗ್ಬಂಧನ ತೆರವುಗೊಳಿಸಿ-ಕೇಂದ್ರಕ್ಕೆ ಕೇರಳ ಹೈಕೋರ್ಟ್ ಆದೇಶ…

ಮಂಗಳೂರು : ಕರ್ನಾಟಕದ ಆಸ್ಪತ್ರೆಗಳಲ್ಲಿ ಕೇರಳದವರಿಗೆ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ವಿಧಿಸಿರುವ ಗಡಿ ದಿಗ್ಬಂದನವನ್ನು ತೆಗೆದು ಹಾಕುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಪ್ರಕಟಿಸಿದೆ.

ಕಾಸರಗೋಡಿನಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕ ಸರಕಾರ ಮುಂಜಾಗೃತ ಕ್ರಮವಾಗಿ ಕೇರಳ ಕರ್ನಾಟಕದ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ.

ಆದರೆ ಕೇರಳ ಸರಕಾರ ಕರ್ನಾಟಕ ಆದೇಶದ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಗಡಿ ನಿರ್ಬಂಧ ತೆಗೆದು ಹಾಕುವಂತೆ ಮನವಿ ಮಾಡಿದ್ದರು, ಆದರೆ ರಾಜ್ಯ ಸರಕಾರ ಯಾವುದೇ ಕಾರಣಕ್ಕೆ ಗಡಿ ನಿರ್ಬಂಧ ಸಡಿಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿತ್ತು.

ಈ ಹಿನ್ನಲೆ ಕೇರಳ ಹೈಕೋರ್ಟ್ ಅಸೋಸಿಯೇಷನ್ ನವರು ಕೇರಳ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.

ಮಂಗಳೂರು ಮತ್ತು ಕೇರಳದ ಕಾಸರಗೋಡು ನಡುವೆ ಸಂಪರ್ಕಿಸುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ. ಆದ್ದರಿಂದ ಈ ರಸ್ತೆಗಳನ್ನು ದಿಗ್ಬಂಧನದಿಂದ ಮುಕ್ತವಾಗಿರಿಸುವಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಕರ್ನಾಟಕವು ನಿರ್ಮಿಸಿರುವ ಗಡಿ ಪ್ರವೇಶ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಬೇಕೆಂದು ನಾವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ. ಜೊತೆಗೆ ಯಾವುದೇ ವಿಳಂಬವಿಲ್ಲದೆ ಎರಡು ರಾಜ್ಯಗಳ ನಡುವಿನ ಗಡಿಯುದ್ದಕ್ಕೂ, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯುವ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ನ್ಯಾಯಮೂರ್ತಿ ಎ.ಕೆ.ಜಯಶಂಕರ್ ನಂಬಿಯಾರ್ ಹಾಗೂ ಶಾಜಿ ಪಿ ಚಲಿ ಅವರಿದ್ದ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಭಾರತದ ಪ್ರಜೆ ದೇಶದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಮುಕ್ತವಾಗಿ ಸಂಚರಿಸಬಹುದು ಎಂದು ಸಂವಿಧಾನದ 19 (1) (ಡಿ) ವಿಧಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಗಡಿ ದಿಗ್ಬಂಧನ ಸರಿಯಲ್ಲ. ಗಡಿ ದಿಗ್ಬಂಧನ ತೆರವು ಸ್ಥಗಿತವಾದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಿಗೆ ತೊಂದರೆಯಾಗಬಹುದು ಎಂದು ಹೈಕೋರ್ಟ್ ತಿಳಿಸಿದೆ.

Sponsors

Related Articles

Leave a Reply

Your email address will not be published. Required fields are marked *

Back to top button