ದ.ಕ – ಮತ್ತೆ ಮೂರು ಕೊರೊನಾ ಪಾಸಿಟಿವ್…

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದೆ.
ಹಾಗಾಗಿ ಒಟ್ಟು ಪ್ರಕರಣಗಳ ಸಂಖ್ಯೆ 12 ಆಗಿದೆ.

ಮೂರು ಹೊಸ ಪ್ರಕರಣಗಳಲ್ಲಿ ಒಬ್ಬರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಮಹಿಳೆ ಹಾಗೂ ಇನ್ನಿಬ್ಬರು ದೆಹಲಿಯಲ್ಲಿ ತಬ್ಲಿಫ್-ಎ-ಜಮಾತ್ ಸಮಾವೇಶದಲ್ಲಿ ಭಾಗವಹಿಸಿದವರಾಗಿದ್ದಾರೆ.

ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾಗವಹಿಸಿದವರ ಪೈಕಿ 9 ಜನರ ವರದಿ ಬಂದಿದ್ದು 2 ಪಾಸಿಟಿವ್ ಮತ್ತು ಉಳಿದ 20 ಜನರ ವರದಿ ಇನ್ನು ಬಂದಿಲ್ಲ. ಅಲ್ಲದೆ ಅವರ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ನಿಜಾಮುದ್ದೀನ್‌ನಲ್ಲಿ ನಡೆದ ತಬ್ಲಿಫ್-ಎ-ಜಮಾತ್ ಧಾರ್ಮಿಕ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸದ್ಯದ ಪ್ರಕಾರ 29 ಭಾಗವಹಿಸಿದ ಬಗ್ಗೆ ಮಾಹಿತಿ ಇದ್ದು 9 ಜನರ ವರದಿ ಬಂದಿದ್ದು 2 ಪಾಸಿಟಿವ್ ಆಗಿದೆ. ಉಳಿದ 20 ಜನರ ವರದಿಗಾಗಿ ಜಿಲ್ಲಾಡಳಿತ ನಿರೀಕ್ಷೆಯಲ್ಲಿದೆ.

ದೆಹಲಿಗೆ ತೆರಳಿದ್ದ ಓರ್ವ ಯುವಕ ತುಂಬೆಯ ಮದಕ ಬೊಳ್ಳಾಡಿ ಪ್ರದೇಶದ ನಿವಾಸಿಯಾಗಿದ್ದು , ಈ ಗ್ರಾಮದಲ್ಲಿ 500ಕ್ಕೂ ಮನೆಗಳಿವೆ. ತಹಶೀಲ್ದಾರ್ ಮತ್ತು ಎಸ್ ಐ ಸ್ಥಳಕ್ಕೆ ಆಗಮಿಸಿದ್ದು ತುಂಬೆ ಗ್ರಾಮವನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಯಾರು ಮನೆಯಿಂದ ಹೊರಬಾರದಂತೆ ಪೊಲೀಸರು ಧ್ವನಿವರ್ಧಕ ಮೂಲಕ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button