ದ.ಕ- ನಾಲ್ಕು ಕೋವಿಡ್-19 ಸೋಂಕಿತರು ಗುಣಮುಖ…

ಮಂಗಳೂರು: ಜಿಲ್ಲೆಯ ಕೋವಿಡ್-19 ಸೋಂಕಿತರ ಪೈಕಿ ನಾಲ್ವರು ಸಂಪೂರ್ಣವಾಗಿ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಭಟ್ಕಳ ಮೂಲದ ಓರ್ವ ಸೋಂಕಿತ, ಮೂರು ಮಂದಿ ಕಾಸರಗೋಡು ನಿವಾಸಿಗಳು ವೆನ್ಲಾಕ್ ಆಸ್ಪತ್ರೆಯಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ಇವರಿಗೆ ಮುಂದೆ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button