ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸಹಿತ ವೈರಾಣು ಪರೀಕ್ಷಾ ಪ್ರಯೋಗಾಲಯ ಆರಂಭ…
ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈರಾಣು ಪರೀಕ್ಷಾ ಪ್ರಯೋಗಾಲಯ ಅಧಿಕೃತವಾಗಿ ಆರಂಭವಾಗಿದೆ.
ವೆನ್ಲಾಕ್ ನಲ್ಲಿ ಆರಂಭಿಸಲಾಗಿರುವ ವೈರಾಣು ಸಂಶೋಧನಾ ಮತ್ತು ರೋಗ ಪರೀಕ್ಷಾ ಪ್ರಯೋಗಾಲಯವು ಸರಕಾರದಿಂದ ಎಲ್ಲ ರೀತಿಯ ಪರಿಶೀಲನೆಗೆ ಒಳಪಟ್ಟು ಸುಸೂತ್ರ ಕಾರ್ಯಾರಂಭಕ್ಕೆ ಅನುಮತಿ ದೊರಕಿದೆ. ಹೀಗಾಗಿ ಮಹಾಮಾರಿ ಕೊರೊನಾ ಸೊಂಕಿನ ಪರೀಕ್ಷಾ ವರದಿ ಬೆಂಗಳೂರು, ಶಿವಮೊಗ್ಗದಿಂದ ಬರುವಿಕೆಗಾಗಿ ಇನ್ನು ಕಾಯಬೇಕಾಗಿಲ್ಲ.ದ.ಕ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೂ ಇದು ಸಹಕಾರಿಯಾಗಲಿರುವುದು ವಿಶೇಷ.
ಮಂಗಳೂರಿನಲ್ಲಿ ಕೊರೊನಾ ಸಹಿತ ವೈರಾಣು ಪತ್ತೆ ಪ್ರಯೋಗಾಲಯ ಆರಂಭಕ್ಕೆ ಮಂಜೂರಾತಿ ದೊರಕಿ ಏ. 1ರಿಂದ ಇದರ ಪ್ರಯೋಗಿಕ ಪರೀಕ್ಷೆ ಆರಂಭವಾಗಿತ್ತು. ಇದೀಗ ಏ.7 ರಿಂದ ಪೂರ್ಣ ಪ್ರಮಾಣದ ಪ್ರಯೋಗಾಲಯ ಆರಂಭವಾಗಿದ್ದು ಗಂಟಲು ಸ್ರಾವ ಮಾದರಿ ಪರೀಕ್ಷಾ ವರದಿಯನ್ನುಇನ್ಮುಂದೆ ಕೆಲವೇ ಗಂಟೆಗಳಲ್ಲಿ ಪಡೆಯಬಹುದಾಗಿದೆ.