ಮಾಜಿ ಕೇಂದ್ರ ಸಚಿವ ಎಂ ವಿ ರಾಜಶೇಖರನ್ ನಿಧನ….

ಬೆಂಗಳೂರು: ಕೆಲವು ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಎಂ. ವಿ ರಾಜಶೇಖರನ್(92 ) ಅವರು ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಅಳಿಯನಾದ ರಾಜಶೇಖರನ್ ಅವರು ಡಾ. ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.

ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button