ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ – ಮೇ. 3 ರ ನಂತರ ನಿರ್ಧಾರ…..
ಬೆಂಗಳೂರು: ದೇಶಾದ್ಯಂತ ಲಾಕ್‌ಡೌನ್ ವಿಸ್ತರಣೆಯಾಗಿರೋದ್ರಿಂದ ರಾಜ್ಯದಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಬಗ್ಗೆ ಯಾವುದೇ ನಿರ್ಧಾರಗಳು ಆದ್ರೂ ಮೇ 3ರ ಬಳಿಕವೇ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್‌ನ ಅಟ್ಟಹಾಸದ ಹಿನ್ನೆಲೆ ಮೇ 3ರವರೆಗೂ ಲಾಕ್‌ಡೌನ್ ಮುಂದುವರಿಕೆ ಮಾಡಲಾಗಿದೆ. ಇದರ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಕೂಡಾ ಮೇ 3 ರವರೆಗೂ ಲಾಕ್‌ಡೌನ್ ಮುಂದುವರಿಯಲಿದೆ. ಹೀಗಾಗಿ, ದ್ವಿತೀಯ ಪಿಯುಸಿಗೆ ಬಾಕಿಯಿರುವ ಒಂದು ಭಾಷೆಯ ಪರೀಕ್ಷೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿಚಾರಗಳನ್ನು ಮೇ 3 ರವರೆಗೂ ಮುಂದೂಡಲಾಗಿದೆ. ಪರೀಕ್ಷೆಯ ಬಗ್ಗೆ ಯಾವುದೇ ನಿರ್ಧಾರಗಳು ಆದ್ರೂ, ಅದು ಮೇ 3 ರ ಬಳಿಕವೇ. ಲಾಕ್‌ಡೌನ್ ವಿಸ್ತರಣೆಯಾದ ಹಿನ್ನೆಲೆ, ಪರೀಕ್ಷೆಯ ಬಗ್ಗೆ ಈಗ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸುರೇಶ್‌ಕುಮಾರ್ ಹೇಳಿದರು.