ಕೊರೊನಾ – ಕೇಂದ್ರದ ಹಾಟ್ ಸ್ಪಾಟ್ ಪಟ್ಟಿಯಲ್ಲಿ ದ.ಕ ಸೇರಿ ರಾಜ್ಯದ 8 ಜಿಲ್ಲೆಗಳು….
ಮಂಗಳೂರು : ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 170 ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ದಕ್ಷಿಣಕನ್ನಡ ಸೇರಿ ರಾಜ್ಯದ 8 ಜಿಲ್ಲೆಗಳು ಒಳಗೊಂಡಿದೆ.
ಕೇಂದ್ರ ಸರ್ಕಾರವು ಜಿಲ್ಲೆಗಳಲ್ಲಿರುವ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಆಧಾರದ ಮೇಲೆ ವಲಯವಾರು ವಿಂಗಡಣೆ ಮಾಡಿದೆ. ರಾಜ್ಯದ ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಂಗಳೂರು ನಗರ, ಮೈಸೂರು, ಬೆಳಗಾವಿ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಗಳಾಗಿ ಗುರುತಿಸಲಾಗಿದೆ.
ಇನ್ನು ಆರೆಂಜ್ ಜೋನ್ (ನಾನ್ ಹಾಟ್‍ಸ್ಪಾಟ್) ಪಟ್ಟಿಯಲ್ಲಿ ರಾಜ್ಯದ 11 ಜಿಲ್ಲೆಗಳಿವೆ. ಅವುಗಳೆಂದರೆ ಬಳ್ಳಾರಿ, ಮಂಡ್ಯ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಉಡುಪಿ, ಗದಗ, ತುಮಕೂರು, ಕೊಡಗು, ವಿಜಯಪುರ, ಚಿಕ್ಕಬಳ್ಳಾಪುರ, ಉತ್ತರಕನ್ನಡ.
ಹಸಿರು ವಲಯ ಪಟ್ಟಿಯಲ್ಲಿ ರಾಜ್ಯದ 11 ಜಿಲ್ಲೆಗಳಿವೆ. ಅವುಗಳೆಂದರೆ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ. ಈ ಭಾಗದಲ್ಲಿ ಯಾವುದೇ ಕೊರೊನಾ ಪ್ರಕರಣಗಳ ಕಂಡು ಬಂದಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಸದ್ಯದ ಮಾಹಿತಿಯನ್ನು ಪಡೆದು ಕೇಂದ್ರ ಸರ್ಕಾರ ವಲಯವಾರು ಪಟ್ಟಿ ಬಿಡುಗಡೆ ಮಾಡಿದೆ. ಜೊತೆಗೆ ಪ್ರತಿ ನಾಲ್ಕು ದಿನಗಳಿಗೊಮ್ಮೆ ಈ ಪಟ್ಟಿ ಪರಿಷ್ಕೃತವಾಗುತ್ತದೆ. ಏಪ್ರಿಲ್ 20ರ ಬಳಿಕ ಕೇಂದ್ರ ಸರ್ಕಾರ ಹೊಸ ಪಟ್ಟಿ ಬಿಡುಗಡೆ ಮಾಡಲಿದೆ.