ಉಪ್ಪಿನಂಗಡಿ ನಿವಾಸಿಗೆ ಕೋವಿಡ್-19 ಪಾಸಿಟಿವ್ ದೃಢ….

ಮಂಗಳೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿವಾಸಿಯೋರ್ವರಿಗೆ ಕೊರೊನ ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ.

ವೈಯಕ್ತಿಕ ಕೆಲಸದ ಹಿನ್ನೆಲೆ ಇತ್ತೀಚೆಗೆ ಈ ಯುವಕ ದೆಹಲಿಗೆ ತೆರಳಿದ್ದ ಎನ್ನಲಾಗಿದೆ. ಮಾ.21ರಂದು ಮಂಗಳೂರಿಗೆ ಆಗಮಿಸಿದ್ದ. ನಂತರ ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ಆತನನ್ನು ಪತ್ತೆ ಮಾಡಿದ್ದ ಜಿಲ್ಲಾಡಳಿತ ಮಾ.23ರಿಂದಲೇ ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಬಂದ ವರದಿಯಲ್ಲಿ ಯುವಕನಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ದೃಢವಾಗಿದೆ.

ಒಟ್ಟಾರೆ ಜಿಲ್ಲೆಯಲ್ಲಿ 13 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದ್ದು, ಈ ಪೈಕಿ 9 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button