ವಿಯೆಟ್ನಾಂ ಪ್ರಜೆಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ಅಸಭ್ಯ ವರ್ತನೆ – ಪ್ರಕರಣ ದಾಖಲು….

ಮಂಗಳೂರು: ವ್ಯವಹಾರ ನಿಮಿತ್ತ ನಗರಕ್ಕೆ ಆಗಮಿಸಿದ ವಿಯೆಟ್ನಾಂ ಪ್ರಜೆಗಳು ಅಪಾರ್ಟ್‌ಮೆಂಟ್‌ನಲ್ಲಿ ಅಸಭ್ಯವಾಗಿ ವರ್ತಿಸಿದರೆಂಬ ಕಾರಣಕ್ಕೆ ಇಬ್ಬರ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, 5 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಅಡಕೆ ವ್ಯವಹಾರಕ್ಕೆ ಸಂಬಂಧಿಸಿ ಇಬ್ಬರು ಯುವತಿಯರ ಸಮೇತ 5 ಮಂದಿ ಮಾರ್ಚ್ ತಿಂಗಳಿನಲ್ಲಿ ಮಂಗಳೂರು ವಿಮಾನ ನಿಲ್ದಾಣ ಮೂಲಕ ನಗರಕ್ಕೆ ಆಗಮಿಸಿದ್ದರು. ವಿದೇಶದಿಂದ ಬಂದ ಕಾರಣ ನಗರ ವ್ಯಕ್ತಿಯೊಬ್ಬರ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆಗೆ ಗೊತ್ತುಪಡಿಸಿ ಪ್ರತ್ಯೇಕ ನಿಗಾದಲ್ಲಿರಿಸಲಾಗಿತ್ತು. 14 ದಿನಗಳ ಕ್ವಾರಂಟೈನ್ ಮುಗಿದ ಬಳಿಕ ಈ ಪ್ರಜೆಗಳು ಅಪಾರ್ಟ್‌ಮೆಂಟ್‌ನಲ್ಲಿ ಉಗುಳಿ, ಅಸಭ್ಯ ವರ್ತನೆ ತೋರುತ್ತಿದ್ದರು ಎನ್ನಲಾಗಿದೆ. ಇವರ ವಿರುದ್ಧ ಅಪಾರ್ಟ್ ಮೆಂಟ್ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದು, ಕದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 5 ಮಂದಿಯಲ್ಲಿ ಇಬ್ಬರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 5 ಮಂದಿಯನ್ನು ಕೂಡಾ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ಗೆ ದಾಖಲಿಸಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button