ದ.ಕ- ಮತ್ತೊಬ್ಬರಲ್ಲಿ ಕೊರೊನಾ ಪಾಸಿಟಿವ್….
ಮಂಗಳೂರು: ಉಪ್ಪಿನಂಗಡಿ ತಾಲೂಕಿನಲ್ಲಿ ಈ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದ ವ್ಯಕ್ತಿಯ ಪತ್ನಿಯಲ್ಲಿ ಇದೀಗ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಇದೀಗ ಆತಂಕ ಹೆಚ್ಚಾಗಿದೆ. ಈ ಬಗ್ಗೆ ರಾಜ್ಯದಿಂದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯ ವರದಿ ಇನ್ನಷ್ಟೇ ಬರಬೇಕಿದೆ.
12 ದಿನಗಳಲ್ಲಿ ದ.ಕ. ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಅದರ ಬಳಿಕ ಏಪ್ರಿಲ್ 17ರಂದು ಉಪ್ಪಿನಂಗಡಿ ಮೂಲದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಅವರಿಗೆ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ವ್ಯಕ್ತಿಯ ಪತ್ನಿಯಲ್ಲಿ ಏಪ್ರಿಲ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಮಾಹಿತಿ ಲಭಿಸಿದೆ.