ಬಂಟ್ವಾಳ ಕೊರೊನ ಪ್ರಕರಣ – 34 ಮಂದಿಗೆ ಕ್ವಾರಂಟೈನ್….
ಬಂಟ್ವಾಳ: ಕೊರೊನ ಸೋಂಕು ದೃಢಪಟ್ಟು ಬಂಟ್ವಾಳ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಮಹಿಳೆಯ ಕುಟುಂಬದ ಸದಸ್ಯರು ಸೇರಿದಂತೆ ಅವರ ಸಂಪರ್ಕದಲ್ಲಿದ್ದ 28 ಮಂದಿ ಹಾಗೂ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಇತರ ಸಿಬಂದಿ ಸೇರಿ 6 ಮಂದಿ ಹೀಗೆ 34 ಮಂದಿಯನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ತಿಳಿಸಿದರು.
ಅವರು ಸೋಮವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪತ್ರಕರ್ತರ ಜತೆ ಮಾತನಾಡಿದರು.ಮಹಿಳೆಯ ಟ್ರಾವೆಲ್ ಹಿಸ್ಟರಿಯ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜತೆಗೆ ಬಂಟ್ವಾಳ ಪೇಟೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದ್ದು, ಅಲ್ಲಿನ ನಿವಾಸಿಗಳಿಗೆ ಆಹಾರ ಸಾಮಾಗ್ರಿಗಳನ್ನು ಮನೆಗಳಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ಬಂಟ್ವಾಳ ಸುತ್ತಮುತ್ತಲ ಬಿ.ಸಿ.ರೋಡು, ಮೆಲ್ಕಾರ್, ಕಲ್ಲಡ್ಕ ಮೊದಲಾದ ಪ್ರದೇಶಗಳಲ್ಲಿ ಮಂಗಳೂರು ಮಾದರಿಯಲ್ಲೇ ಮಾರುಕಟ್ಟೆಯನ್ನು ಮಾಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.