ದ.ಕ – ಮತ್ತೊಂದು ಕೊರೊನಾ ಪ್ರಕರಣ ಧೃಢ….
ಬಂಟ್ವಾಳ :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕರೊನೊ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬಂಟ್ವಾಳ ಮೂಲದ 67 ವರ್ಷ ವಯಸ್ಸಿನ ಮಹಿಳೆಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಮಹಿಳೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಗಂಟಲು ದ್ರವ ತೆಗೆದು ಕೊವಿಡ್ 19 ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು, ಕೊರೊನಾ ಇರುವುದು ದೃಢಪಟ್ಟಿದೆ.
ಕೋವಿಡ್-19 ಸೋಂಕು ದೃಢಪಟ್ಟು ಬಂಟ್ವಾಳದ ಮಹಿಳೆ ಮೃತಪಟ್ಟ ಆತಂಕದ ನಡುವೆಯೇ ಬಂಟ್ವಾಳದ ಮತ್ತೋರ್ವ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿರುವ ಕುರಿತು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.
ಈ ಮಹಿಳೆ ಕೊರೋನ ವೈರಸ್ ಸೋಂಕಿನಿಂದ ರವಿವಾರ ಮೃತಪಟ್ಟ ಬಂಟ್ವಾಳ ಪೇಟೆಯ ಮಹಿಳೆಯ ನೆರೆ ಮನೆಯ ಮಹಿಳೆ ಎಂದು ತಿಳಿದು ಬಂದಿದೆ. ಮೃತ ಮಹಿಳೆಯ ಸಂಪರ್ಕದಿಂದ ಇವರಿಗೂ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈ ಮಹಿಳೆಯನ್ನು ಎ.18ರಂದು ಮಂಗಳೂರು ಕೋವಿಡ್ – 19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ – 19 ಪರೀಕ್ಷೆಗೆ ಕಳುಹಿಸಿದ್ದ ವೃದ್ಧೆಯ ಗಂಟಲ ದ್ರವ ಮಾದರಿಯ ವರದಿ ಇಂದು ಬಂದಿದ್ದು ಅದರಲ್ಲಿ ಪಾಸಿಟಿವ್ ಆಗಿದೆ ಎಂದು ಪ್ರಕಟನೆ ತಿಳಿಸಿದೆ.