ದ.ಕ – ಕೊರೊನಾಗೆ ಎರಡನೇ ಬಲಿ…

ಮಂಗಳೂರು: ಭಾನುವಾರದಂದು ಕೊರೊನಾ ಸೋಂಕಿನ ಕಾರಣದಿಂದ ಮೃತಪಟ್ಟಿದ್ದ ಮಹಿಳೆಯ 75 ವರ್ಷ ಪ್ರಾಯದ ಅತ್ತೆ ಇಂದು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಕೊರೊನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಎರಡನೇ ಬಲಿಯಾಗಿದೆ.
ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ಈ ಮೃತ ವೃದ್ಧೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು ಮತ್ತು ಅವರ ಸೊಸೆ ಕೋವಿಡ್ ಸೋಂಕಿಗೆ ಮೃತಪಟ್ಟ ಕಾರಣ ಇವರನ್ನು ನಗರದ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಮಹಿಳೆಯಲ್ಲಿ ಇಂದು ಸೋಂಕು ದೃಢಪಟ್ಟಿತ್ತು.