ದ.ಕ – ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ ….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, 47 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.
ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಸ್ವೀಪರ್ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ವೃದ್ಧೆಗೆ ಕೊರೊನಾ ದೃಢಪಟ್ಟ ಕೂಡಲೇ ಆಸ್ಪತ್ರೆ ಸಿಬ್ಬಂದಿಯನ್ನು ಮಂಗಳೂರಿನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು,ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.
ಇಂದು ರಾಜ್ಯದಲ್ಲಿ ಪತ್ತೆಯಾದ ಒಂದೇ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಇದಾಗಿದೆ.

EWgsHkhU0AAALUi 192x300 1

Related Articles

Leave a Reply

Your email address will not be published. Required fields are marked *