ಸಂಸದ ನಳಿನ್‍ ಕುಮಾರ್ ಕಟೀಲ್ ಅವರಿಂದ 20 ಸಾವಿರ ಕಿಟ್ ವಿತರಣೆ….

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ವೈಯಕ್ತಿಕ ನೆಲೆಯಲ್ಲಿ ನೀಡಿದ 20 ಸಾವಿರ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ಇಂದು ನಗರದ ಕದ್ರಿ ಮೈದಾನದಲ್ಲಿ ಬಿಜೆಪಿ ಶಾಸಕರು ಹಾಗೂ ಮಂಡಲ ಸಮಿತಿ ಅಧ್ಯಕ್ಷರುಗಳಿಗೆ ಹಸ್ತಾಂತರಿಸಲಾಯಿತು.

ಕಿಟ್ ಹಸ್ತಾಂತರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದವರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಬಡ ಜನತೆಯ ನೆರವಿಗೆ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ 20 ಸಾವಿರ ಕಿಟ್ ನೀಡಲಾಗಿದ್ದು, ಶಾಸಕರು ಹಾಗೂ ಬಿಜೆಪಿ ಪ್ರಮುಖರು ಆಯಾ ಕ್ಷೇತ್ರದಲ್ಲಿ ಬಡವರನ್ನು ಗುರುತಿಸಿ ವಿತರಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಿಟ್ ಒದಗಿಸಲು ಪ್ರಯತ್ನಿಸುತ್ತೇನೆ ಎಂದರು.

ಶಾಸಕರುಗಳಾದ ಸಂಜೀವ ಮಠಂದೂರು, ಎಸ್.ಅಂಗಾರ, ಉಮಾನಾಥ್ ಕೋಟ್ಯಾನ್, ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಮೇಯರ್ ದಿವಾಕರ ಪಾಂಡೇಶ್ವರ, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ್, ಸುಧೀರ್ ಶೆಟ್ಟಿ ಕಣ್ಣೂರು, ಯುವ ಮೋರ್ಚಾ ಅಧ್ಯಕ್ಷ ಸಂದೇಶ್ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್, ವಿಧಾನ ಪರಿಷತ್ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ಹರಿಕೃಷ್ಣ ಬಂಟ್ವಾಳ್, ಸಂತೋಷ ಕುಮಾರ್ ರೈ ಬೋಳಿಯಾರ್, ನಿತಿನ್ ಕುಮಾರ್, ಹರೀಶ್ ಕಂಜಿಪಿಲಿ, ವಿಜಯಕುಮಾರ್ ಶೆಟ್ಟಿ, ಕದ್ರಿ ಮನೋಹರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button