ಬಾಲಿವುಡ್ ಹಿರಿಯ ನಟ ರಿಷಿಕಪೂರ್ ನಿಧನ….

ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್(67 ) ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
2018ರಲ್ಲಿ ಕ್ಯಾನ್ಸರ್ ಗೆ ತುತ್ತಾಗಿದ್ದ ಇವರು ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದರಿಂದ ಮುಂಬೈನ ಸರ್ ಹೆಚ್. ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ನಿಧನರಾಗಿದ್ದಾರೆ. ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.