ದ.ಕ – ಕೊರೊನಾ ಸೋಂಕಿಗೆ ಮೂರನೇ ಬಲಿ….
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಕಸಬಾದ ಕೊರೋನಾ ಪೀಡಿತ ಮಹಿಳೆ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ರೋಗಿ ಸಂಖ್ಯೆ p-409 ಎಂಬವರು 4 ದಿನಗಳ ಹಿಂದೆ ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಂಟ್ವಾಳ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 18ರಂದು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ದಾಖಲಾಗಿದ್ದರು. ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಏಪ್ರಿಲ್ 20 ರಂದು ವರದಿ ಪಾಸಿಟಿವ್ ಬಂದಿತ್ತು. ನಿನ್ನೆಯಿಂದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ವೆಂಟಿಲೇಟರ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಅವರು ಮೃತಪಟ್ಟಿದ್ದಾರೆ.