ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮ್ಮದ್ ವಿಧಿವಶ….
ಬೆಂಗಳೂರು: ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮ್ಮದ್(84) ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ.
ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿಸಾರ್ ಅಹಮ್ಮದ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 1936ರ ಫೆಬ್ರವರಿ 5ರಂದು ಜನಿಸಿದ್ದರು.
ಮನಸು ಗಾಂಧಿ ಬಜಾರು, ನೆನೆದವರ ಮನದಲ್ಲಿ, ಸುಮಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ಆಯ್ದ ಕವಿತೆಗಳು, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ಬರಿರಂತರ, ಸಮಗ್ರ ಕವಿತೆಗಳು, ನವೋಲ್ಲಾಸ, ಆಕಾಶಕ್ಕೆ ಸರಹದ್ದುಗಳಿಲ್ಲ, ಅರವತ್ತೈದರ ಐಸಿರಿ, ಸಮಗ್ರ ಭಾವಗೀತೆಗಳು, ಪ್ರಾತಿನಿಧಿಕ ಕವನಗಳು, ನಿತ್ಯೋತ್ಸವ ಅವರ ಪ್ರಮುಖ ಕವನಸಂಕಲನಗಳು.
ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,ಗೊರೂರು ಪ್ರಶಸ್ತಿ, ಅನಕೃ ಪ್ರಶಸ್ತಿ,ಕೆಂಪೇಗೌಡ ಪ್ರಶಸ್ತಿ, ಪಂಪ ಪ್ರಶಸ್ತಿ,1981ರ ರಾಜ್ಯೋತ್ಸವ ಪ್ರಶಸ್ತಿ,2003ರ ನಾಡೋಜ ಪ್ರಶಸ್ತಿ,2006ರ ಅರಸು ಪ್ರಶಸ್ತಿ,2006ರ ಮಾಸ್ತಿ ಪ್ರಶಸ್ತಿ ಲಭಿಸಿದೆ.