ಕೋವಿಡ್ ವಿರುದ್ಧ ಹೋರಾಟದಲ್ಲಿ ರಾಜಕೀಯ ಸರಿಯಲ್ಲ – ನಳಿನ್ ಕುಮಾರ್ ಕಟೀಲ್…

ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 1, 610 ಕೋಟಿ ರೂಪಾಯಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಕಾರ್ಮಿಕರಿಗೆ ಹಲವು ಸರ್ಕಾರ ಅನುದಾನವನ್ನು ಬಿಡುಗಡೆಗೊಳಿಸಿದೆ. ಇಂತಹ ಸಂದರ್ಭಗಳಲ್ಲಿ ಜನರಿಗೆ ವಿಶ್ವಾಸ ತುಂಬುವ ಕೆಲಸ ಮಾಡಬೇಕಾಗಿದೆ. ವಲಸೆ ಕಾರ್ಮಿಕರಿಗೆ ಪ್ರತಿಯೊಬ್ಬರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಇನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕೆಲವೊಂದು ನಿರ್ಧಾರಗಳಿಂದ ಕೋವಿಡ್ -19 ನಿಯಂತ್ರಣಕ್ಕೆ ಬರಲು ಸಾಧ್ಯವಾಗಿದೆ ಎಂದು ಅವರು ಹೇಳಿದರು
ಕಳೆದ 40 ದಿನಗಳಿಂದ ಬಿಜೆಪಿ ಕಾರ್ಯಕರ್ತರು ಕಾರ್ಮಿಕರಿರುವ ಸ್ಥಳಗಳಿಗೆ ಹೋಗಿ ಆಹಾರಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ವ್ಯವಸ್ಥೆಯನ್ನ ಮಾಡಲಾಗುತ್ತಿದೆ . ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಸಂದೇಶ್ ಶೆಟ್ಟಿ, ವಕ್ತಾರರಾದ ರವಿಶಂಕರ್ ಮಿಜಾರ್, ಜಗದೀಶ್ ಶೇಣವ, ಬಿಜೆಪಿ ಪ್ರಮುಖರಾದ ಜಿತೇಂದ್ರ ಕೊಟ್ಟಾರಿ ಉಪಸ್ಥಿತರಿದ್ದರು.