ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6, ಉಡುಪಿಯಲ್ಲಿ 27 ಕೊರೊನಾ ಪಾಸಿಟಿವ್…

ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದು (ಗುರುವಾರ) 6 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ.
ಮಹಾರಾಷ್ಟ್ರ ರಾಜ್ಯದಿಂದ ಆಗಮಿಸಿದ 61 ಮತ್ತು 18 ವರ್ಷದ ಮಹಿಳೆಯರಲ್ಲಿ, 62 , 50 , 24, 36 ವರ್ಷದ ಪುರುಷರಲ್ಲಿ ಕೊರೊನಾ ಪತ್ತೆಯಾಗಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ ಇಂದು 27 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದ 24 ಜನರಲ್ಲಿ ಕೇರಳದಿಂದ ಬಂದ ಓರ್ವರಿಗೆ ಹಾಗೂ ತೆಲಂಗಾಣದಿಂದ ಬಂದ ಇಬ್ಬರಲ್ಲಿ ಕೊರೊನಾ ದೃಢವಾಗಿದೆ.
ರಾಜ್ಯದಲ್ಲಿ ಇಂದು ಮತ್ತೆ 75 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2493 ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button