ಕೊರೊನಾ – ಬೋಳೂರು ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರ….

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವ 15 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 15 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 13 ಮಂದಿಯ ಆರೋಗ್ಯ ಸ್ಥಿತಿ ತೃಪ್ತಿದಾಯಕವಾಗಿದೆ. ಆದರೆ, ರೋಗಿ ಸಂಖ್ಯೆ-507 ಕುಲಶೇಖರ ಮೂಲದ 80 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವ ವಾಯುವಿನಿಂದ ಬಳಲುತ್ತಿದ್ದಾರೆ. ಇವರ ಆರೋಗ್ಯ ಸ್ಥಿತಿ ನಾಜೂಕಾಗಿದೆ.
ಇನ್ನು ರೋಗಿ ಸಂಖ್ಯೆ 536 ಬೋಳೂರಿನ 58 ವರ್ಷದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಮಹಿಳೆ ಮೆದುಳಿನ ಸೋಂಕಿನಿಂದಲೂ ಕೂಡ ಬಳಲುತ್ತಿದ್ದಾರೆ. ಸದ್ಯ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Sponsors

Related Articles

Leave a Reply

Your email address will not be published. Required fields are marked *

Back to top button