ದ.ಕ – ಜಿಲ್ಲೆಯಲ್ಲಿ ಬುಧವಾರ ಓರ್ವ ಮಹಿಳೆಗೆ ಕೊರೊನ ಸೋಂಕು ಪತ್ತೆ….
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಬುಧವಾರಂದು ಮಂಗಳೂರಿನ ಸೋಮೇಶ್ವರ ಗ್ರಾಮದ ದಾರಂದಬಾಗಿಲುವಿನ 38 ವರ್ಷದ ಮಹಿಳೆಗೆ ಕೋವಿಡ್ ದೃಢಪಟ್ಟಿದೆ.
ಈ ಮಹಿಳೆಗೆ ಫಸ್ಟ್‌ನ್ಯೂರೋ ಆಸ್ಪತ್ರೆಯ ರೋಗಿ ಸಂಖ್ಯೆ ಪಿ-507 ಸಂಪರ್ಕದಿಂದ ಸೋಂಕು ತಗುಲಿದ್ದು ಕೋವಿಡ್ ದೃಢಪಟ್ಟ ಹಿನ್ನಲೆಯಲ್ಲಿ ರೋಗಿಯನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರ ಗ್ರಾಮದ ದಾರಂದಬಾಗಿಲು ಪ್ರದೇಶವನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.