ದ.ಕ – ಬೋಳೂರಿನ ಕೊರೊನಾ ಸೋಂಕಿತ ಮಹಿಳೆ ಮೃತ್ಯು…

ಮಂಗಳೂರು : ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ.ಇದು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ.
ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳಿನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.ಮಹಿಳೆಗೆ ಎಪ್ರಿಲ್ 30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.ಕೊರೊನಾ ದೃಢಪಟ್ಟ ಬಳಿಕ ಮಂಗಳೂರಿನ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.