ದ.ಕ – ದುಬೈನಿಂದ ಬಂದ 15 ಮಂದಿ ಸೇರಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್….
ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸಿರುವ ಪ್ರಯಾಣಿಕರ ಪೈಕಿ ಬರೋಬ್ಬರಿ 15 ಮಂದಿಯಲ್ಲಿ ಹಾಗೂ ಸುರತ್ಕಲ್ ಮೂಲದ ಓರ್ವ ಮಹಿಳೆಯಲ್ಲಿ ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ಬಂದಿಳಿದ 179 ಮಂದಿ ಪೈಕಿ, ದ.ಕ ದ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 15 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. 15 ಮಂದಿ ಪೈಕಿ ಓರ್ವರು ಉತ್ತರ ಕನ್ನಡ ಜಿಲ್ಲೆಯವರಾಗಿದ್ದಾರೆ. ಇದಲ್ಲದೆ ಸುರತ್ಕಲ್ ಮೂಲದ ಮಹಿಳೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ದುಬೈನಿಂದ ಬಂದ ವಿಮಾನದಲ್ಲಿ ದ.ಕ. ಜಿಲ್ಲೆಯ 96, ಉಡುಪಿ ಜಿಲ್ಲೆಯ 52 ಹಾಗೂ ಇತರ ಜಿಲ್ಲೆಗಳ 31 ಪ್ರಯಾಣಿಕರಿದ್ದರು. ಅವರಲ್ಲಿ 38 ಗರ್ಭಿಣಿಯರು, ವೈದ್ಯಕೀಯ ಚಿಕಿತ್ಸೆ ಪಡೆಯುವ ನಿರೀಕ್ಷೆಯಲ್ಲಿರುವವರು, ದುಬಾೖಯಲ್ಲಿ ಕೆಲಸ ಕಳೆದುಕೊಂಡವರು, ವೀಸಾ ಅವಧಿ ಮುಗಿದವರು, ಕುಟುಂಬ ಮೆಡಿಕಲ್ ಅಗತ್ಯ ಇರುವವರು, ಪ್ರವಾಸಕ್ಕೆ ಹೋಗಿ ಬಾಕಿಯಾದವರು ಇದರಲ್ಲಿ ಸೇರಿದ್ದಾರೆ