ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂ.18ಕ್ಕೆ – ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂ.25ರಿಂದ ಜು.4 ರ ವರೆಗೆ….
ಬೆಂಗಳೂರು: ಬಾಕಿ ಉಳಿದಿರುವ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಯನ್ನು ಜೂನ್ 18ರಂದು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಈ ವಿಚಾರ ತಿಳಿಸಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು,
8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಸೆಂಟರ್ ರಲ್ಲಿ ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು, ಇದಕ್ಕಾಗಿ ರಾಜ್ಯ ಸ್ಕೌಟ್ ಮತ್ತು ಗೈಡ್ಸ್ ನ ಸಹಾಯ ದೊರೆಯಲಿದೆ . ಅಲ್ಲದೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ವಿದ್ಯಾರ್ಥಿಗಳ ತಪಾಸಣೆ ಮಾಡ್ತಾರೆ. ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ದಾಯವಾಗಿದೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ ಎಂದಿದ್ದಾರೆ.
ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.