ದ.ಕ- ಜಿಲ್ಲೆಯಲ್ಲಿ ಗುರುವಾರ 6 ಕೊರೊನಾ ಪ್ರಕರಣ ದೃಢ….

ಮಂಗಳೂರು: ಅರೋಗ್ಯ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಅವಿಭಜಿತ ದ.ಕ ಜಿಲ್ಲೆಯಲ್ಲಿ ಇಂದು ಒಟ್ಟು 31 ಪ್ರಕರಣ ದೃಢವಾಗಿದ್ದು, ಉಡುಪಿ ಜಿಲ್ಲೆಯಲ್ಲಿ 25 ಪ್ರಕರಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದುಬೈ ಹಾಗೂ ಮುಂಬೈಯಿಂದ ಬಂದ ಪ್ರಯಾಣಿಕರಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ.