ದ.ಕ – ಗುರುವಾರ 496 ಕೊರೊನಾ ಪರೀಕ್ಷಾ ವರದಿ ನೆಗೆಟಿವ್, ಓರ್ವ ಸೋಂಕಿತ ಗುಣಮುಖ….
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು (ಗುರುವಾರ) 496 ಮಂದಿಯ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಹಾಗೂ ಓರ್ವ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ 35 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಐವರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 21 ಮಂದಿ ಗುಣಮುಖರಾಗಿದ್ದಾರೆ. ಇಂದು 333 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತರ ಅಧಿಕೃತ ವರದಿ ತಿಳಿಸಿದೆ.
ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಏ. 23ರಂದು ವೆನ್ಲಾಕ್ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದ್ದ ಕುಲಶೇಖರ ನಿವಾಸಿ 45 ವರ್ಷದ ವ್ಯಕ್ತಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ನಿನ್ನೆ ಕೂಡ ಜಿಲ್ಲೆಯಲ್ಲಿ ಮೂವರು ಬಿಡುಗಡೆಗೊಂಡಿದ್ದರು.
ರಾಜ್ಯದಲ್ಲಿ ಇಂದು ಒಟ್ಟು 143 ಜನರಿಗೆ ಕೋವಿಡ್-19 ಸೋಂಕು ತಾಗಿದೆ.ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1605ಕ್ಕೆ ಎರಿಕೆಯಾಗಿದೆ. ಇದರಲ್ಲಿ 571 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41 ಮಂದಿ ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ.