ದ.ಕ – 328 ಮಂದಿಯ ಕೊರೊನಾ ಪರೀಕ್ಷಾ ವರದಿ ನೆಗೆಟಿವ್; ಉಡುಪಿ- 23 ಮಂದಿಗೆ ಕೊರೋನಾ ಪಾಸಿಟಿವ್…
ಮಂಗಳೂರು: ಜಿಲ್ಲೆಯಲ್ಲಿ ಇಂದು (ಆದಿತ್ಯವಾರ) ಒಟ್ಟು 329 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು, ಈ ಪೈಕಿ ಒಬ್ಬರ ವರದಿ ಪಾಸಿಟಿವ್ ಹಾಗೂ 328 ಮಂದಿಯ ವರದಿ ನೆಗೆಟಿವ್ ಆಗಿದೆ.
ರವಿವಾರದಂದು 384 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಸುಮಾರು 639 ಮಂದಿಯ ವರದಿ ನಿರೀಕ್ಷಿಸಲಾಗಿದೆ.19 ಮಂದಿಯನ್ನು ನಿಗಾ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿಡಲಾಗಿದೆ. ದಕ್ಷಿಣ ಕನ್ನಡದಲ್ಲಿ 34 ಮಂದಿ ಕೊರೊನಾ ಸೋಂಕಿತರಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನುಉಡುಪಿ ಜಿಲ್ಲೆಯಲ್ಲಿ ರವಿವಾರ ಸಂಜೆಯ ವೇಳೆ ಮತ್ತೆ ಐದು ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಂದೇ ದಿನ 23 ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿದೆ.ದುಬೈನಿಂದ ಬಂದ 44 ವರ್ಷದ ಮಹಿಳೆ, ತೆಲಂಗಾಣದ 26 ವರ್ಷದ ಪುರುಷ ಹಾಗೂ ಮಹಾರಾಷ್ಟ್ರದಿಂದ ಬಂದ ಮೂವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೋನಾ ಪೀಡಿತರ ಸಂಖ್ಯೆ 76ಕ್ಕೇರಿದೆ.