ಸುಳ್ಯ- ಬೆಳ್ಳಾರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಕೊರೊನ ದೃಢ….

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರ ಕೊರೊನ ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ.
ಮುಂಬೈನಲ್ಲಿ ಉದ್ಯೋಗದಲ್ಲಿದ್ದ ಅವರು ಮೇ. 21 ರಂದು ಆಗಮಿಸಿ ಬೆಳ್ಳಾರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಮೇ.25 ರಂದು ಅವರು ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಪಾಸಿಟಿವ್ ಬಂದಿದ್ದು, ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.