ದ.ಕ – ರಾತ್ರಿ ಸಂಚಾರ ಸಂಪೂರ್ಣ ನಿಷೇಧ…

ಮಂಗಳೂರು: ದೇಶದೆಲ್ಲೆಡೆ ಐದನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದು, ಈ ಸಮಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಪ್ಯೂ ವಿಧಿಸಲಾಗಿದೆ. ದ.ಕ. ಜಿಲ್ಲೆಯ ನಗರ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ರಾತ್ರಿ 9 ಗಂಟೆಯ ಬಳಿಕ ಮುಂಜಾನೆಯ 5 ಗಂಟೆಯ ತನಕ ವಾಹನ, ಜನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾರಾದರೂ ನಿಯಮ ಉಲ್ಲಂಘಿಸಿ ಸಂಚರಿಸಿದ್ದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ. ಬಿ. ರೂಪೇಶ್ ಆದೇಶ ನೀಡಿದ್ದಾರೆ.
ಇನ್ನು ಹಗಲು ವೇಳೆಯಲ್ಲಿ ಮನೆಯಿಂದ ಹೊರ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕಾಗಿದೆ. ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರಿಗೆ ದಂಡ ಹಾಕಲಾಗುವುದು.ಮಾಸ್ಕ್ ಧರಿಸದೇ ನಗರ ಪ್ರದೇಶಗಳಲ್ಲಿ ಓಡಾಡಿದವರಿಗೆ 200 ರೂ ದಂಡ ವಿಧಿಸಲು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ.