ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು…

ಮಂಗಳೂರು: ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್(79) ಅವರನ್ನು ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜೂ.8 ರಂದು ನಗರದ ಕೊಡಿಯಾಲಬೈಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.