ಅಶ್ವಿನಿ ನಕ್ಷತ್ರ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಮಯೂರಿ ಕ್ಯಾತರಿ ವಿವಾಹ…
ಬೆಂಗಳೂರು : ಅಶ್ವಿನಿ ನಕ್ಷತ್ರ ಧಾರಾವಾಹಿ ಖ್ಯಾತಿಯ ಮಯೂರಿ ಕ್ಯಾತರಿ ಅವರು ಗೆಳೆಯ ಅರುಣ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ವಿವಾಹ ನೆರವೇರಿತು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಅರುಣ್ ಉದ್ಯೋಗಿಯಾಗಿದ್ದಾರೆ. ಧಾರಾವಾಹಿಯ ಮೂಲಕ ಕಿರುತೆರೆಗೆ ಪ್ರವೇಶಿಸಿದ ಮಯೂರಿ ಅವರು ನಂತರ ಇಷ್ಟಕಾಮ್ಯ , ಕೃಷ್ಣ ಲೀಲಾ, ರುಸ್ತುಂ ಹೀಗೆ ಹಲವಾರು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.