ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ …

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್(34 ) ಬಾಂದ್ರಾದಲ್ಲಿನ ತಮ್ಮ ನಿವಾಸದಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಹಾರದ ಪಾಟ್ನಾದಲ್ಲಿ ಜನಿಸಿದ್ದ ಸುಶಾಂತ್ ಸಿಂಗ್ , ಪವಿತ್ರ ರಿಶ್ತಾ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ” ಕಾಯ್ ಪೋ ಚೇ’ ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್ ಪ್ರವೇಶಿಸಿದ್ದ ಸುಶಾಂತ್ ಸಿಂಗ್, 11 ಚಿತ್ರಗಳಲ್ಲಿ ನಟಿಸಿದ್ದು, ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದರು. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಸಿನಿಮಾದಲ್ಲೂ ಅವರು ನಟಿಸಿದ್ದರು.
ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಲಾಕ್ ಡೌನ್ ವೇಳೆ ಸುಶಾಂತ್ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ. ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು.

791753 Sushant Singh Rajput 021619 300x169

Jpg 300x225

Related Articles

Leave a Reply

Your email address will not be published. Required fields are marked *