ಡಿ ಕೆ ಶಿ ಪದಗ್ರಹಣ – ಸುಳ್ಯ ಕಾಂಗ್ರೆಸ್ ವತಿಯಿಂದ ಪೂರ್ವ ತಯಾರಿ ಕುರಿತು ಸಭೆ…

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಸುಳ್ಯ ನಗರ ಕಾಂಗ್ರೆಸ್ ಸಭೆ ಇಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವೀಕ್ಷಕರಾದ ಕೃಷ್ಣಪ್ಪ ಪಿ, ಸುಧೀರ್ ರೈ ಮೇನಾಲ , ಮಾಜಿ ನಗರ ಪಂಚಾಯತ್ ಅಧ್ಯಕ್ಷ ಸಂಶುದ್ಧೀನ್ ಎಸ್, ಪಿ ಎ ಮಹಮ್ಮದ್, ರಾಜಾರಾಮ್ ಭಟ್ ಬೆಟ್ಟ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧಿಕ್ ಕೊಕ್ಕೊ, ಉಪಸ್ಥಿತರಿದ್ದರು. ಸುಳ್ಯ ನಗರದ ಪ್ರಮುಖ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಮಾದ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರತಿಜ್ಞಾ ಕಾರ್ಯಕ್ರಮದ ಮಾಹಿತಿ ನೀಡಿದರು. ಶಶಿಧರ್ ಎಂ.ಜೆ ಕಾರ್ಯಕ್ರಮ ನಿರೂಪಿಸಿದರು.