ಬೆಂಜನಪದವಿನಲ್ಲಿ ಸ್ಕೂಟರ್ ಗೆ ಕಾರು ಢಿಕ್ಕಿ – ಯುವತಿ ಸಾವು…

ಬಂಟ್ವಾಳ: ಬೆಂಜನಪದವು ಎಂಬಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೃತಪಟ್ಟಿರುವ ದಾರುಣ ಘಟನೆ ಇಂದು ರಾತ್ರಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (27) ಎಂದು ಗುರುತಿಸಲಾಗಿದೆ ಹಾಗೂ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ, ಸ್ಕೂಟರ್ ಚಲಾಯಿಸುತ್ತಿದ್ದ ಯುವತಿಯನ್ನು ಈಕೆಯ ಸ್ನೇಹಿತೆ ಹರ್ಷಿತಾ ಎಂದು ಗುರುತಿಸಲಾಗಿದೆ.ಇವರಿಬ್ಬರೂ ಬಿ.ಸಿ.ರೋಡ್ ನಿಂದ ಬೆಂಜನಪದವು ರಸ್ತೆಯ ಮೂಲಕ ಕಡೆಗೋಳಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಜನಪದವು ಎಂಬಲ್ಲಿ ಎದುರಿನಿಂದ ಬಂದ ಸ್ವಿಫ್ಟ್ ಕಾರು ಇವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಕೂಡಲೇ ಸ್ಥಳೀಯರು ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರೆ ಶ್ಯಾಮಲಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಚಿತ್ರ: ಶ್ಯಾಮಲಾ ಭಟ್