ಕಾಪು- ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್…

ಕಾಪು: ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈಕೆ ಜು.25ರ ಎಸ್.ಎಸ್.ಎಲ್.ಸಿ ಕನ್ನಡ ಮತ್ತು ಜು.27ರಂದು ನಡೆದ ಗಣಿತ ಪರೀಕ್ಷೆಯನ್ನು ಬರೆದಿದ್ದರು. ಈಕೆಯ ತಂದೆಯ ಗಂಟಲು ದ್ರವದ ಮಾದರಿ ಪರೀಕ್ಷೆ ವರದಿಯು ಜೂ.27ರಂದು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈಕೆಯನ್ನು ಕೂಡ ಇದೇ ದಿನ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂ.28ರಂದು ಈ ಪರೀಕ್ಷೆಯ ವರದಿ ಬಂದಿದ್ದು, ಇದರಲ್ಲಿ ಪಾಸಿಟಿವ್ ಎಂಬುದು ದೃಢಪಟ್ಟಿದೆ. ಇದರಿಂದ ಈಕೆ ಜೂ.29ರಂದು ನಡೆಯುವ ವಿಜ್ಞಾನ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button