ಬುಧವಾರ- ಕೊರೊನ ಸೋಂಕಿಗೆ ಜಿಲ್ಲೆಯಲ್ಲಿ ಇಬ್ಬರು ಸಾವು…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು(ಬುಧವಾರ) ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 16 ಕ್ಕೆ ಏರಿಕೆಯಾದಂತಾಗಿದೆ.
ಮಂಗಳೂರಿನ ಬೆಂಗ್ರೆ ನಿವಾಸಿಯಾಗಿದ್ದ, ಡಯಾಬಿಟಿಸ್ ಮತ್ತು ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದ ಸೋಂಕು ಪೀಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಜು.1ರ ಬುಧವಾರ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೋರ್ವ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಯುವಕ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.