ಬುಧವಾರ – ದ. ಕ 84, ಉಡುಪಿ 22 ಹಾಗೂ ರಾಜ್ಯದಲ್ಲಿ 1272 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಬುಧವಾರ) ದ. ಕ ಜಿಲ್ಲೆಯಲ್ಲಿ 84, ಉಡುಪಿ ಜಿಲ್ಲೆಯಲ್ಲಿ 22 ಹಾಗೂ ರಾಜ್ಯದಲ್ಲಿ ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ದ. ಕ ಜಿಲ್ಲೆಯ 84 ಪಾಸಿಟಿವ್ ಪ್ರಕರಣಗಳಲ್ಲಿ ಆರು ಜನರು ಸೌದಿ ಅರೇಬಿಯಾದಿಂದ ಮರಳಿದವರಾಗಿದ್ದಾರೆ.ಜಿಲ್ಲೆಯಲ್ಲಿ ಇಂದು ಒಂದೇ ದಿನ ಮತ್ತೆ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ 31 ವರ್ಷದ ಯುವಕ ಸೋಂಕಿಗೆ ಬಲಿಯಾಗಿದ್ದಾನೆ. ಈತನಲ್ಲಿ ಸಾರಿ ಪ್ರಕರಣದಿಂದ ಸೋಂಕು ದೃಢಪಟ್ಟಿತ್ತು. ಮಂಗಳೂರು ನಿವಾಸಿ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದರು. ಅವರು ಅಧಿಕ ರಕ್ತದೊತ್ತಡ, ಮಧುಮೇಹ, ಆಸ್ಪಿರೇಶನ್, ನ್ಯುಮೋನಿಯಾ, ಮೆದುಳಿನ ಉರಿಯೂತ ಮತ್ತು ಮಲೇರಿಯಾದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಭಟ್ಕಳ ನಿವಾಸಿ 76 ವರ್ಷದ ವ್ಯಕ್ತಿ ಮೃತಪಟ್ಟವರಾಗಿದ್ದಾರೆ. ಇವರು ಅಧಿಕ ರಕ್ತದೊತ್ತಡ, ಶ್ವಾಸಕೋಶದ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಂದು ವರ್ಷದ ಮಗು ಸೇರಿ ಒಟ್ಟು 22 ಮಂದಿಗೆ ಕೊರೊನಾ ಪಾಸಿಟಿವ್ ದೃಢಗೊಂಡಿದೆ.ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಬಂದ 5, ತೆಲಂಗಾಣದಿಂದ ಬಂದ ಒಬ್ಬರು, ಬೆಂಗಳೂರಿನಿಂದ ಬಂದ ಒಬ್ಬರು ಹಾಗೂ ಅಬುದಾಬಿಯಿಂದ ವಾಪಾಸಾದ ಒಂದು ವರ್ಷದ ಮಗುವಿಗೆ ಪಾಸಿಟಿವ್ ದೃಢಗೊಂಡಿದೆ. ಅಲ್ಲದೆ ಪ್ರಾಥಮಿಕ ಸಂಪರ್ಕದಿಂದಾಗಿ 14 ಮಂದಿಗೆ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ .
ಇನ್ನು ರಾಜ್ಯದಲ್ಲಿ ಇಂದು 1272 ಕೊರೊನ ಪಾಸಿಟಿವ್ ಪತ್ತೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button